ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಕರುನಾಡಿಗೆ ಬಿದ್ದಿದ್ದ ‘ಲಾಕ್’ ತೆರವಿನ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಜೂನ್ 14ಕ್ಕೂ ಮೊದಲೇ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಬಂದಿರುವ ಕಡೆಗಳಲ್ಲಿ ಲಾಕ್ ಡೌನ್ ತೆರವು ಮಾಡಲು ಚಿಂತನೆ ನಡೆಸಲಾಗಿದೆ. ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಾಲ್ಕೈದು ದಿನಗಳಲ್ಲಿ ಲಾಕ್ ಡೌನ್ ತೆರವಿನ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜೂನ್ 14ರ ಮೊದಲೇ ಬೆಂಗಳೂರಿನಲ್ಲಿ ಲಾಕ್ ಡೌನ್ ಸಡಿಲಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.