alex Certify GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ದೇಶಾದ್ಯಂತ ತಗ್ಗಿದ ಮಹಾಮಾರಿ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ದೇಶಾದ್ಯಂತ ತಗ್ಗಿದ ಮಹಾಮಾರಿ ಅಟ್ಟಹಾಸ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,579 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 543 ದಿನಗಳಲ್ಲೇ ಪತ್ತೆಯಾದ ಅತಿ ಕಡಿಮೆ ಸೋಂಕಿತರ ಸಂಖ್ಯೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 236 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 466147 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 113584 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12202 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33946749 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,64,980 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,92,154 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,17,63,73,499 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...