ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಕೇಸ್ ಗಳು ದಾಖಲಾಗಿವೆ. ಕೇವಲ 89 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು 2020ರ ಮಾರ್ಚ್ ಬಳಿಕ ಭಾರತದಲ್ಲಿ ಪತ್ತೆಯಾದ ಅತಿ ಕಡಿಮೆ ಸಂಖ್ಯೆಯ ದೈನಂದಿನ ಕೋವಿಡ್ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 5,30,726 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,035 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,48,472 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 50,871 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,17,56,888 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,63,342 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.