ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್. ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮೆಟ್ರೋ ಸೇವೆ ಆರಂಭವಾಗಲಿದೆ.
ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗ 7.53 ಕೀ.ಮೀ ಉದ್ದವಿದ್ದು ನಿತ್ಯ 75 ಸಾವಿರಕ್ಕೂ ಹೆಚ್ಚು ಜನ ಪ್ರಯಾಣಿಸಲಿದ್ದಾರೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಪ್ರಯಾಣಿಸಲು 56 ರೂಪಾಯಿ ದರ ನಿಗದಿಪಡಿಸಲಾಗಿದೆ.
ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಮೆಟ್ರೋ ಮಾರ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.