ಬೆಂಗಳೂರು: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಕಲಿಕಾ ನಿರ್ವಹಣಾ ವ್ಯವಸ್ಥೆ ಬೋಧನೆ-ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡಿದ ಸಿಎಂ ಯಡಿಯೂರಪ್ಪ, ಸರ್ಕಾರಿ ಪದವಿ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಓದುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಲಾಗಿದೆ ಎಂದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ನಿಟ್ಟಿನಲ್ಲಿ ಸರ್ಕಾರದಿಂದ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.