ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್ ಮಂಡನೆಗೂ ಮುನ್ನವೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಸಿಲಿಂಡರ್ ದರ ಇಳಿಕೆ ಮಾಡಿದೆ.
ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. 19 ಕೆ.ಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 91.50 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಮೂಲಕ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನತೆಗೆ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಇದೀಗ ವಾಣಿಜ್ಯ ಬಳಕೆ ಸಿಲಿಂಡರ್ ದರ ಕಡಿಮೆಯಾಗಿರುವುದು ಕೊಂಚ ಸಮಾಧಾನ ತಂದಿದೆ.