alex Certify GOOD NEWS: ಬಜೆಟ್ ಮಂಡನೆಗೂ ಮುನ್ನವೇ ಬಂಪರ್ ಕೊಡುಗೆ; ಸಿಲಿಂಡರ್ ದರ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಬಜೆಟ್ ಮಂಡನೆಗೂ ಮುನ್ನವೇ ಬಂಪರ್ ಕೊಡುಗೆ; ಸಿಲಿಂಡರ್ ದರ ಇಳಿಕೆ

ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್ ಮಂಡನೆಗೂ ಮುನ್ನವೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಸಿಲಿಂಡರ್ ದರ ಇಳಿಕೆ ಮಾಡಿದೆ.

ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. 19 ಕೆ.ಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 91.50 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಮೂಲಕ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನತೆಗೆ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಇದೀಗ ವಾಣಿಜ್ಯ ಬಳಕೆ ಸಿಲಿಂಡರ್ ದರ ಕಡಿಮೆಯಾಗಿರುವುದು ಕೊಂಚ ಸಮಾಧಾನ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...