alex Certify GOOD NEWS: ಮತ್ತಷ್ಟು ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕು; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಮತ್ತಷ್ಟು ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕು; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 22,270 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ಕಡಿಮೆಯಾಗುತ್ತಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 325 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,11,230 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,53,739 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 60,298 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,20,37,536 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 36,28,578 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,03,86,834 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 12,35,471 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...