
ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.
ಇಲಾಖಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಸಚಿವ ಎಂ.ಸಿ. ಸುಧಾಕರ್ ಅವರು, ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯ ದಾಖಲಾತಿ ಪರಿಶೀಲನೆಗೆ ಶೀಘ್ರ ಕ್ರಮ ವಹಿಸಲು ಸಚಿವರು ಸೂಚನೆ ನೀಡಿದ್ದು, ಈ ಮೂಲಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.