ಧಾರವಾಡ : ಬಸ್ ಗಳ ಖರೀದಿಗೆ ಮತ್ತು ಸುಮಾರು 13000 ಜನ ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲು ಸಾರಿಗೆ ಇಲಾಖೆಯಿಂದ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇಂದು ಸಂಜೆ ಸತ್ತೂರಿನ ಡಾ.ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಜತ ಮಹೋತ್ಸವ ಸಂಭ್ರಮ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪ್ರಶಸ್ತಿ, ಪದಕವಿತರಿಸಿ, ಸ್ಮರಣ ಸಂಚಿಕೆ ಬಿಡುಗಡೆ ಮಾಡಿ, ಮಾತನಾಡಿದರು.
ಸಾರಿಗೆ ಇಲಾಖೆಯಲ್ಲಿ ವಿವಿಧ ಕಾರ್ಯಕ್ರಮ ಮತ್ತು ಕಾರ್ಯಚಟುವಟಿಕೆಗಳನ್ನು ಹಮ್ಮಿಕೋಳ್ಳಲು ಅನುವಾಗುವಂತೆ ಪ್ರಸ್ತುತ ಬಜೆಟ್ ದಲ್ಲಿ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿಗಳು ಸುಮಾರು 1500 ಕೋಟಿ ರೂ.ಹಣ ಹಂಚಿಕೆ ಮಾಡಿ, ಈಗಾಗಲೇ ವಾಯವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 150 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ನಿಯೋಜಿಸಲಾಗುವ ನಿರುದ್ಯೋಗಿ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಭಾರಿ ಮತ್ತು ಲಘು ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ 2000-01 ಇಂಧನದ ಗುಣಮಟ್ಟದ ನಿಖರತೆಯನ್ನು ಕಾಯ್ದುಕೊಳ್ಳಲು ಇಂಧನದ ಪರೀಕ್ಷೆಗಾಗಿ ಇಂಧನದ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ. ಸಂಸ್ಥೆಯ 55 ಘಟಕಗಳಿಂದ ಪ್ರತಿ ತಿಂಗಳು ಪ್ರತಿ ಘಟಕದ 2 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗುತ್ತದೆ. ಒಟ್ಟು 55 ಘಟಕಗಳಿಂದ ತಿಂಗಳಿಗೆ ಸುಮಾರು 80 ರಿಂದ 98 ಸ್ಯಾಂಪಲ್‌ಗಳನ್ನು ಬೇರೆ ಬೇರೆ ವಿಧಾನಗಳಿಂದ ಪರೀಕ್ಷಿಸಲಾಗುತ್ತದೆ.