alex Certify KPTCL ನಿಂದ ಭರ್ಜರಿ ಗುಡ್ ನ್ಯೂಸ್: 1878 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPTCL ನಿಂದ ಭರ್ಜರಿ ಗುಡ್ ನ್ಯೂಸ್: 1878 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್​)ದಲ್ಲಿ 1899 ಕಿರಿಯ ಪವರ್​​​ ಮ್ಯಾನ್​​ ಹುದ್ದೆಗಳಿಗೆ ಪ್ರಕ್ರಿಯೆ ಆರಂಭವಾಗಿದೆ.

ಈ ನೇಮಕಾತಿಯ ಪ್ರಾರಂಭಿಕ ಹಂತವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ಎಂದು ಇಂಧನ ಸಚಿವ ವಿ. ಸುನೀಲ್​ ಕುಮಾರ್​​ ಮಾಹಿತಿ ನೀಡಿದ್ರು.

ಬೆಂಗಳೂರಿನ ಕಾವೇರಿ ಭವನಲ್ಲಿರುವ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕೆಪಿಟಿಸಿಎಲ್​ ಹುದ್ದೆಗೆ 2019ರಲ್ಲೇ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಸಾಕಷ್ಟು ಮಂದಿ ನನ್ನ ಬಳಿ ಹೇಳಿದ್ದರು. ಹೀಗಾಗಿ ನಾನು ನೆನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗೆ ಚುರುಕು ಮುಟ್ಟಿಸಿದ್ದೇನೆ. ಇದರ ಫಲವಾಗಿ ಇಂದು 21 ಮಂದಿ ಕಿರಿಯ ಪವರ್​ ಮ್ಯಾನ್​ಗಳಿಗೆ ಸಾಂಕೇತಿಕವಾಗಿ ಆದೇಶ ಪ್ರತಿ ನೀಡಲಾಗಿದೆ. ಉಳಿದ 1878 ಮಂದಿ ಶೀಘ್ರದಲ್ಲೇ ಆದೇಶ ಪ್ರತಿ ನೀಡಲಾಗುತ್ತದೆ ಎಂದು ಸುನೀಲ್​ ಕುಮಾರ್​ ಹೇಳಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...