alex Certify GOOD NEWS: 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಾಖಲೆ ಪ್ರಮಾಣದಲ್ಲಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಾಖಲೆ ಪ್ರಮಾಣದಲ್ಲಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,78,882 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 91,930 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,16,77,641 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,66,993 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,72,95,87,490 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 10,67,908 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...