alex Certify GOOD NEWS: 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಇನ್ನಷ್ಟು ಕುಸಿತವಾಯ್ತು ಕೋವಿಡ್ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಇನ್ನಷ್ಟು ಕುಸಿತವಾಯ್ತು ಕೋವಿಡ್ ಕೇಸ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 347 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,23,127 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,817 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,17,60,458 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 44,68,365 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,73,42,62,440 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 12,29,536 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...