alex Certify BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. . ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ.

ದಿನಾಂಕ:14.06.2023 ರಂದು ನಡೆದ ಸಭೆಯ ನಿರ್ಣಯದಂತೆ, ದಿನಾಂಕ:11.02.2023ರೊಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಮ್ಮ ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:08.07.2023ರವರೆಗೆ ಕಾಲಾವಕಾಶ ನೀಡಿ ಆದೇಶ ಹೂರಡಿಸುವಂತೆ ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ನಲ್ಲಿ ದಿನಾಂಕ:11.02.2023 ಲೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...