alex Certify GOOD NEWS: 70 ದಿನಗಳಲ್ಲಿ ಮೊದಲ ಬಾರಿಗೆ ಅತಿ ಕಡಿಮೆ ಸೋಂಕಿತರ ಸಂಖ್ಯೆ ದಾಖಲೆ; 24 ಗಂಟೆಯಲ್ಲಿ 84,332 ಜನರಲ್ಲಿ ಕೋವಿಡ್ ಪಾಸಿಟಿವ್; 1,21,311 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 70 ದಿನಗಳಲ್ಲಿ ಮೊದಲ ಬಾರಿಗೆ ಅತಿ ಕಡಿಮೆ ಸೋಂಕಿತರ ಸಂಖ್ಯೆ ದಾಖಲೆ; 24 ಗಂಟೆಯಲ್ಲಿ 84,332 ಜನರಲ್ಲಿ ಕೋವಿಡ್ ಪಾಸಿಟಿವ್; 1,21,311 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಳೆದ 70 ದಿನಗಳಲ್ಲಿ ಇದೇ ಮೊದಲಬಾರಿಗೆ ಇಷ್ಟು ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಲಾಕ್ ಡೌನ್, ವ್ಯಾಕ್ಸಿನೇಷನ್ ಬಳಿಕ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 84,332 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 4,002 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,67,081ಕ್ಕೆ ಏರಿಕೆಯಾಗಿದೆ.

ವಾಹನ ಸವಾರರಿಗೆ ಬಿಗ್ ಶಾಕ್ – ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಇನ್ನು ದೇಶದಲ್ಲಿ 10,80,690 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,79,11,384 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,21,311 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...