ಬೆಂಗಳೂರು : ರಾಜ್ಯದಲ್ಲಿ 793 ಕೋಟಿ ಬಂಡವಾಳ ಹೂಡಿಕೆ ಮಾಡಲಿದ್ದು, 4 ಸಾವಿರ ನೇರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ನೀತಿಯಡಿ ಎರಡು ಮೆಗಾ ಸೇರಿ ಒಟ್ಟು 28 ಪ್ರವಾಸೋದ್ಯಮ ಯೋಜನಾ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. 28 ಯೋಜನೆಗಳ ಪೈಕಿ ಒಂದಕ್ಕೆ ಮಾತ್ರ ಸ್ಥಳ ವೀಕ್ಷಣೆಯ ಷರತ್ತು ವಿಧಿಸಲಾಗಿದೆ. ಈ ಯೋಜನೆಗಳ ಮೂಲಕ ಒಟ್ಟು ₹793 ಕೋಟಿ ಬಂಡವಾಳ ಹೂಡಿಕೆ ಆಗಲಿದೆ. 4 ಸಾವಿರ ನೇರ ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.