alex Certify GOOD NEWS: 81 ದಿನಗಳಲ್ಲಿ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆಯಾದ ಕೋವಿಡ್ ಸೋಂಕಿತರ ಸಂಖ್ಯೆ; ದೇಶದಲ್ಲಿ ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 81 ದಿನಗಳಲ್ಲಿ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆಯಾದ ಕೋವಿಡ್ ಸೋಂಕಿತರ ಸಂಖ್ಯೆ; ದೇಶದಲ್ಲಿ ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಕೇಸ್

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗಿದ್ದು, ಕಳೆದ 81 ದಿನಗಳ ಬಳಿಕ ಇದೇ ಮೊದಲಬಾರಿಗೆ 60ಸಾವಿರಕ್ಕೂ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 58,419 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,98,81,965ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1576 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 7,29,243ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,87,66,009 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 87,619 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 27,66,93,572 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...