alex Certify GOOD NEWS : ‘ಪೊಲೀಸ್ ಕಾನ್ಸ್ಟೇಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : ‘ಸಿಎಂ ಸಿದ್ದರಾಮಯ್ಯ’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ‘ಪೊಲೀಸ್ ಕಾನ್ಸ್ಟೇಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : ‘ಸಿಎಂ ಸಿದ್ದರಾಮಯ್ಯ’ ಘೋಷಣೆ

ಬೆಂಗಳೂರು : ಪೊಲೀಸ ಕಾನ್ಸ್ಟೇಬಲ್ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ.

ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು. ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...