ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ಅಂತವರು ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?
1. ಎಲ್ಲಾ ಸದಸ್ಯರ ಆಧಾರ್ ಕಾರ್ಡ್
2. ಆದಾಯ ಪ್ರಮಾಣ ಪತ್ರ
3. ಜಾತಿ ಪ್ರಮಾಣ ಪತ್ರ
4. ವಿಳಾಸದ ಪುರಾವೆ
5. ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
6. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದ ಅನೇಕರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ ಅರ್ಹರಿಂದ ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ.Ahara.kar.nic.in ವೆಬ್ಸೈಟ್ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಪಡಿತರ ಚೀಟಿ ಕುರಿತ ಯಾವುದೇ ಗೊಂದಲಗಳಿದ್ದರೆ, ನೀವು ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಕರೆ ಮಾಡಬಹುದಾಗಿದೆ.