ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಡಿಸಿದೆ.
ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡಿಕೊಳ್ಳಬೇಕು.
ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 3ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು. ಜನವರಿ 9ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಿದ್ದುಪಡಿಗೆ ಜನವರಿ 10 ಮತ್ತು 11ರ ವರೆಗೆ ಅವಕಾಶವಿರುತ್ತದೆ. ಜನವರಿ 13ರಂದು ಪಟ್ಟಿಯ ಅನ್ವಯ ಕಾಲೇಜು ಆಯ್ಕೆಯ ಕೌನ್ಸಿಲಿಂಗ್ ನಡೆಸಲಿದ್ದು, ಜನವರಿ 30ರಂದು ಕೌನ್ಸೆಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.
ಮಾನ್ಯ ನ್ಯಾಯಾಲಯವು ರಿಟ್ ಅಪೀಲು ಸಂಖ್ಯೆ: 1578/2024ಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ನೀಡಲಿರುವ ತೀರ್ಪಿಗೆ ಬದ್ಧರಾಗಿ ಪ್ರಸ್ತುತ ರಿಟ್ ಅರ್ಜಿ ಸಂಖ್ಯೆ:23600/2023 ಕ್ಕೆ ಮಾನ್ಯ ನ್ಯಾಯಾಲಯವು ದಿನಾಂಕ: 05.09.2024 ರಂದು ನೀಡಿರುವ ತೀರ್ಪಿನನ್ವಯ ಸೇವಾ ಅನುಭವ ಹಾಗೂ ಯುಜಿಸಿ ವಿದ್ಯಾರ್ಹತೆ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು 2024-25ನೇ ಸಾಲಿಗೆ ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.
1. ತಾತ್ಕಾಲಿಕ ಕೌನ್ಸಿಲಿಂಗ್ ಪ್ರಕ್ರಿಯೆ ವೇಳಾಪಟ್ಟಿ: