ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಧಿ ಮುಗಿದ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.
ಖಾಲಿಯಾದ ನಿಗಮ, ಮಂಡಳಿಗಳ ಹುದ್ದೆಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ನಿಗಮ, ಮಂಡಳಿಯಲ್ಲಿ ಅವಕಾಶ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೆ, ನಿಗಮ ಮಂಡಳಿ ನೇಮಕಾತಿಗೆ ಒತ್ತಡ ಕೂಡ ಇರುವುದರಿಂದ ಖಾಲಿ ಇರುವ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದು, ಶೀಘ್ರವೇ ನೇಮಕಾತಿ ಆರಂಭವಾಗಲಿದೆ ಎಂದು ಹೇಳಲಾಗಿದೆ.