
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಸುಲಭವಾಗಿ ಆನ್ ಲೈನ್ ಮೂಲಕವೇ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಗ್ರಾಮೀಣ ಜನತೆಗೆ ಇಲಾಖೆಗಳ ಸೇವೆಗಳ ದಾಖಲೆಗಳನ್ನು ತ್ವರಿತವಾಗಿ ಮತ್ತು ಸಮೀಪವಾಗಿ ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಒಂದೇ ಸೂರಿನಡಿ ಗ್ರಾಮೀಣ ಜನರ ಅನುಕೂಲಕ್ಕಾಗಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯ ತೆರಿಗೆ ಮತ್ತು ಇತರೆ ಫೀಸುಗಳ ಸಂಗ್ರಹ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಿಒಎಸ್ ಯಂತ್ರಗಳನ್ನು ಗ್ರಾಮಪಂಚಾಯಿತಿಗಳಿಗೆ ಒದಗಿಸಿದೆ. ಇನ್ಮುಂದೆ ಗ್ರಾಮಪಂಚಾಯತಿಗಳಲ್ಲಿ ಡಿಜಿಟಲ್ ಪಾವತಿ ಶುರುವಾಗಲಿದ್ದು, ಕೈ ಬರಹದ ರಶೀದಿಗಳನ್ನು ಕಾಲಕ್ರಮೇಣ ಸ್ಥಗಿತಗೊಳಿಸಲು ಕ್ರಮ ವಹಿಸಲಾಗುತ್ತಿದೆ.
ಬಾಪೂಜಿ ಸೇವಾ ಕೇಂದ್ರ ಮತ್ತು ಪಿಒಎಸ್ ಯಂತ್ರ ಮತ್ತು ಗೂಗಲ್ ಪೇ, ಪೇಟಿಎಂ ಮೂಲಕ ಪಾವತಿಸಿರುವ ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ರಶೀದಿಯನ್ನು ಲಾಗ್ ಇನ್ ಆಗದೇ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಡೌನ್ ಲೋಡ್ ಮಾಡಬಹುದಾಗಿದೆ.