ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಶೇ.40 ರಿಂದ 74 ರಷ್ಟು ವಿಕಲಚೇತನರಿಗೆ 800 ರೂ., 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1,400 ರೂ. ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ 2,000 ರೂ. ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ.ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ.