
ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ವಿಧೇಯಕಕ್ಕೆ ಅಸ್ತು ಎಂದಿದೆ, ಇ-ಖಾತಾ ಕುರಿತಾದ ವಿಧೇಯಕಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ವಿಧೇಯಕವನ್ನು ಅಂಗೀಕರಿಸಿದಲ್ಲಿ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಇರುವ ಮನೆ, ನಿವೇಶನ ಸಕ್ರಮಗೊಳಿಸಲು ಅವಕಾಶ ಸಿಗಲಿದೆ.