ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ರಿಯಾಯಿತಿಗಳು ಮತ್ತು ಪ್ರೋತ್ಸಾಹದ ಯೋಜನೆಯನ್ನು ಜಾರಿಗೆ ತಂದಿದೆ. FAME-2 ನೀತಿಯ ಅಡಿಯಲ್ಲಿ, ಸರ್ಕಾರ ಸಬ್ಸಿಡಿಯನ್ನು ಹೆಚ್ಚಿಸಿದೆ. ಈಗ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಮತ್ತೊಂದು ರಿಯಾಯಿತಿ ನೀಡಿದೆ.
ರಸ್ತೆ ಸಾರಿಗೆ ಸಚಿವಾಲಯವು, ಬ್ಯಾಟರಿ ಚಾಲಿತ ವಾಹನಗಳ ನೋಂದಣಿ ಪ್ರಮಾಣಪತ್ರ ಶುಲ್ಕವನ್ನು ಮನ್ನಾ ಮಾಡಿದೆ. ಎಲೆಕ್ಟ್ರಿಕ್ ವಾಹನವನ್ನು ಖರೀದಿಸಲು ಯೋಚಿಸುತ್ತಿದ್ದರೆ, ಅದು ದ್ವಿಚಕ್ರ ವಾಹನವಾಗಲಿ ಅಥವಾ ನಾಲ್ಕು ಚಕ್ರದ ವಾಹನವಾಗಲಿ ಅದರ ನೋಂದಣಿ ಪ್ರಮಾಣ ಪತ್ರಕ್ಕೆ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈಗಾಗಲೇ ಇ-ವಾಹನವನ್ನು ಹೊಂದಿದ್ದರೆ, ಆರ್‌ಸಿ ನವೀಕರಣಕ್ಕಾಗಿ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಕುರಿತು ಸಚಿವಾಲಯದಿಂದ ಅಧಿಸೂಚನೆ ಹೊರಡಿಸಲಾಗಿದೆ.
ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು, ದೆಹಲಿ, ಮುಂಬೈ, ರಾಜಸ್ಥಾನ ಮತ್ತು ಗುಜರಾತ್‌ನಂತಹ ಅನೇಕ ರಾಜ್ಯಗಳು ತಮ್ಮದೇ ಆದ ಇ-ವಾಹನ ನೀತಿಯನ್ನು ಜಾರಿಗೆ ತಂದಿವೆ. ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಇಡೀ ದೇಶದಲ್ಲಿ ಅತಿ ಹೆಚ್ಚು ಸಬ್ಸಿಡಿ ಸಿಗುತ್ತಿದೆ. 1 ಲಕ್ಷದ 50 ಸಾವಿರ ರೂಪಾಯಿಗಳವರೆಗೆ ಲಾಭ ಪಡೆಯಬಹುದು. ಮಹಾರಾಷ್ಟ್ರ ಸರ್ಕಾರ ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಸಬ್ಸಿಡಿ ಮತ್ತು ಪ್ರೋತ್ಸಾಹವನ್ನು ನೀಡುತ್ತಿದೆ.