GOOD NEWS : ರಾಜ್ಯದಲ್ಲಿ ಗಿಗ್ ಕಾರ್ಮಿಕರ ‘ಕಲ್ಯಾಣ ಮಂಡಳಿ’ ರಚನೆಗೆ ತೀರ್ಮಾನ : CM ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು : ರಾಜ್ಯದ ಗಿಗ್ ಕಾರ್ಮಿಕರಿಗೆ ಗುಡ್ ನ್ಯೂಸ್ ಎಂಬಂತೆ ಕಲ್ಯಾಣ ಮಂಡಳಿ ಸ್ಥಾಪನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಇಂದು ಲೋಕಸಭೆ ಪ್ರತಿಪಕ್ಷ ನಾಯಕರಾದ ಅವರ ಜೊತೆ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಸಂಘಟಿತ ವಲಯದ ಈ ಕಾರ್ಮಿಕರಿಗೆ ಮೊದಲ ಬಾರಿಗೆ ಅಪಘಾತ ವಿಮೆ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರವು ಈಗ ಇನ್ನೊಂದು ಮಹತ್ವದ ನಿರ್ಧಾರ ಕೈಗೊಂಡು ಶ್ರಮಜೀವಿಗಳ ಬಗೆಗಿನ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ನಂತರ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ಐತಿಹಾಸಿಕ ತೀರ್ಮಾನಕ್ಕೆ ಇಂದು ಬರಲಾಗಿದ್ದು, ಸಂಬಂಧಿತ ಸಂಸ್ಥೆಗಳಿಂದ ಶೇ.5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read