ರೈತರಿಗೆ ಮತ್ತೊಂದು ಗುಡ್ ನ್ಯೂಸ್: ದಶಕಗಳ ಬೇಡಿಕೆ ಇತ್ಯರ್ಥಕ್ಕೆ ಸರ್ಕಾರದ ಮಹತ್ವದ ಕ್ರಮ: ದರ್ಖಾಸ್ತು ಪೋಡಿಗೆ ಚಾಲನೆ

ಬೆಂಗಳೂರು: ರೈತರ ದಶಕಗಳ ದರ್ಖಾಸ್ತು ಪೋಡಿ ಸಮಸ್ಯೆ ಬಗೆಹರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಂಪೂರ್ಣ ಮತ್ತು ಕನಿಷ್ಠ ದಾಖಲೆ ಹೊಂದಿರುವ ರೈತರಿಗೆ ಮುಂದಿನ 2-3 ವರ್ಷದಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು. ಈಗಾಗಲೇ ಕಾರ್ಯ ಆರಂಭವಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಾದ್ಯಂತ ಎಷ್ಟು ರೈತರ ಪೋಡಿ ಕೆಲಸ ಬಾಕಿ ಇದೆ ಎನ್ನುವ ಮಾಹಿತಿ, ಅಂಕಿ ಸಂಖ್ಯೆ ಸರ್ಕಾರದ ಬಳಿ ಇಲ್ಲ. ಈ ಹಿನ್ನೆಲೆಯಲ್ಲಿ ಇದೇ ಸೆ. 2ರಿಂದ ದರ್ಖಾಸ್ತು ಪೋಡಿ ಅಭಿಯಾನ ಆರಂಭಿಸಲಾಗಿದೆ. ರೈತರ ನಮೂನೆ 1-5 ದಾಖಲೆಗಳ ಪರಿಶೀಲನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಠ 4ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ ಗಳಲ್ಲಿ ನಮೂನೆ 1-5 ದಾಖಲೆ ಪರಿಶೀಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರ ಕಡತ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದ್ದು, ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೆ ಎಂದು ಗುರುತಿಸಲಾಗುತ್ತದೆ. ಅಧಿಕಾರಿಗಳು ಇದನ್ನು ಪರಿಗಣಿಸಿ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಶಿಫಾರಸು ಮಾಡಲಿದ್ದಾರೆ. ನಂತರ ರೈತರಿಗೆ ಪೋಡಿ ಲಭ್ಯವಾಗಲಿದೆ. ರಾಜ್ಯದಾದ್ಯಂತ ಪೋಡಿ ಅಭಿಯಾನ ಜಾರಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read