ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಅಬಕಾರಿ ಇಲಾಖೆಯಲ್ಲಿಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ ಮಾಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ಘೋಷಣೆ ಮಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು
• ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.
• ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು.
ನೋಂದಣಿ ಮತ್ತು ಮುದ್ರಾಂಕ ಇಲಾಖೆ:
• ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.
. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
• ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
• ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಇಂದು ನಡೆದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು#ಪ್ರಗತಿ_ಪರಿಶೀಲನಾ_ಸಭೆ pic.twitter.com/tHwvLuQptp
— Siddaramaiah (@siddaramaiah) December 3, 2024