ಬೆಂಗಳೂರು : ರಾಕಿಂಗ್ ಸ್ಟಾರ್ , ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಹಳ ನಿರೀಕ್ಷೆ ಹುಟ್ಟಿಸಿದೆ. ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಎಂದರೆ ಏಪ್ರಿಲ್ 15 ರಿಂದ ಬೆಂಗಳೂರಿನಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
ಮೂಲಗಳ ಪ್ರಕಾರ ಇನ್ನೂ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಿಲ್ಲ, ಏಪ್ರಿಲ್ 15 ರಿಂದ ಬೆಂಗಳೂರಿನಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಇದಕ್ಕಾಗಿ ಬೆಂಗಳೂರಿನ ಎಚ್.ಎಂ.ಟಿ ಫ್ಯಾಕ್ಟರಿಯಲ್ಲಿ ಬೃಹತ್ ಸೆಟ್ ಹಾಕಲಾಗಿದೆಯಂತೆ.
ಮಲಯಾಳ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ ದಾಸ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಡ್ರಗ್ ಮಾಫಿಯಾದ ಸುತ್ತಾ ಚಿತ್ರದ ಕಥೆ ಹೆಣೆಯಲಾಗಿದೆ. 2025 ರಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ.