ಬೆಂಗಳೂರು : ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲವು ಬ್ರ್ಯಾಂಡ್ ಗಳ ಮದ್ಯದ ದರವು ಜುಲೈ 1 ರಿಂದ ಇಳಿಕೆಯಾಗಲಿದೆ.
ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ.ಪ್ರತಿ ಲೀಟರ್ ಮದ್ಯದ ಬೆಲೆ ಎಷ್ಟು ಇಳಿಕೆಯಾಗಲಿದೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಮದ್ಯದ ದರ ಕಮ್ಮಿಯಾಗುವುದಂತು ಫಿಕ್ಸ್ ಆದಂತಿದೆ.
ರಾಜ್ಯದಲ್ಲಿ ಎಇಡಿ ಪ್ರಮಾಣ ಹೆಚ್ಚಿರುವ ಕಾರಣಕ್ಕೆ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ದುಬಾರಿಯಾಗಿದೆ. ಈ ಕಾರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಪೂರೈಕೆಯಾಗುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತಿದೆ.ಆದ್ದರಿಂದ ಸರ್ಕಾರ ಮದ್ಯದ ಬೆಲೆ ಇಳಿಸಿ ಹೆಚ್ಚಿನ ಲಾಭ ಪಡೆಯಲು ಮುಂದಾಗಿದೆ.