ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಡಿಸೆಂಬರ್ 6, 2024 ಕ್ಕೆ ‘ಪುಷ್ಪ 2’ ರಿಲೀಸ್ ಆಗಲಿದೆ.
ಈ ಬಗ್ಗೆ ಸಿನಿಮಾದ ನಿರ್ಮಾಪಕರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ.
‘ಪುಷ್ಪ 2’ ಕಳೆದ ಎರಡು ವರ್ಷಗಳಿಂದ ಬಹುನಿರೀಕ್ಷಿತ ಭಾರತೀಯ ಚಿತ್ರಗಳಲ್ಲಿ ಒಂದಾಗಿದೆ. “ಚಿತ್ರದ ಜನಪ್ರಿಯತೆ ಅನಿರೀಕ್ಷಿತ ಮಟ್ಟವನ್ನು ತಲುಪಿದೆ, ಹಾಡುಗಳು ಮತ್ತು ಟೀಸರ್ ಸಿನಿಮಾದ ಬಗ್ಗೆ ನಿರೀಕ್ಷೆ ಮೂಡಿಸಿದೆ.
ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಜಂಟಿಯಾಗಿ ನಿರ್ಮಿಸಿರುವ ‘ಪುಷ್ಪ 2: ದಿ ರೂಲ್’ ಚಿತ್ರದಲ್ಲಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಬಹುಮುಖ ನಟ ಫಹಾದ್ ಫಾಸಿಲ್ ಮುಖ್ಯ ಪಾತ್ರಗಳಲ್ಲಿದ್ದಾರೆ.