ಪ್ರಸಕ್ತ(2024-25) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು(ಹೊಸ) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು(ರಿನೀವಲ್), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಈ ಯೋಜನೆಗಳಡಿ ಸಹಾಯಧನ/ ಸಾಲ, ಸೌಲಭ್ಯ ಪಡೆಯಲು ಇಚ್ಛಿಸುವವರಿಂದ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 30 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಆಗಿರಬೇಕು. ನಿಗಮವು ಅನಷ್ಟಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ.
ಒಂದು ಕುಟುಂಬದ ಒಬ್ಬರಿಗೆ ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿದ್ದು, ಸೌಲಭ್ಯ ಒದಗಿಸಲಾಗುವುದು. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://ambigaradevelopment.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಯೋಜನೆಗಳ ಮಾರ್ಗ ಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.