![](https://kannadadunia.com/wp-content/uploads/2023/08/UP-anganwadi-workers-to-be-armed-with-sma.jpg)
ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಹುದಿನದ ಬೇಡಿಕೆಯಾದ ಸ್ಮಾರ್ಟ್ ಫೋನ್ ಹಾಗೂ ಗ್ರಾಚ್ಯುಟಿಗೆ ಬಜೆಟ್ ನಲ್ಲಿ ಒಪ್ಪಿಗೆ ಸಿಕ್ಕಿದೆ.
ರಾಜ್ಯ ಸರ್ಕಾರದ ಬಜೆಟ್ ಮಂಡಿಸಿರುವ ಸಿಎಂ ಸಿದರಾಮಯ್ಯ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ತರಬೇತಿ ಕಾರ್ಯಗಾರಾ ಆಯೋಜಿಸಲು 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.