ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತರಿಗೆ ಸೀರೆ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿರುವ 1.37 ಲಕ್ಷ ಅಂಗನವಾಡಿ ಕಾರ್ಯಕರ್ತರು, ಸಹಾಯಕಿರಿಗೆ ತಲಾ 500 ರೂ.ಗಳ ಎರಡು ಸೀರೆಗಳಂತೆ 12.75 ಕೋಟಿ ರೂ. ವೆಚ್ಚದಲ್ಲಿ 2.74 ಲಕ್ಷ ಸೀರೆ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
2023-24 ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ತೀರ್ಮಾನಿಸಲಾಗಿದೆ.