ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎಂಬಂತೆ ಶೀಘ್ರವೇ ಜೀವ ವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ ICDS ಉಳಿಸಿ ಮಕ್ಕಳನ್ನು ರಕ್ಷಿಸಿ ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ವಿಮಾ ಯೋಜನೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಹಾಗೂ ಗೌರವ ಧನ ಹೆಚ್ಚಳ ಬಗ್ಗೆ ಕೂಡ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದರು.
ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ ICDS ಉಳಿಸಿ ಮಕ್ಕಳನ್ನು ರಕ್ಷಿಸಿ ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದರು. ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಂಕಣಕಾರರಾದ ಟಿ.ಆರ್.ಚಂದ್ರಶೇಖರ್, ಸಿ.ಐ.ಟಿ.ಯು ಕರ್ನಾಟಕ ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷರಾದ ಶಾಂತ ಎನ್.ಘಂಟೆ, ಖಜಾಂಚಿ ಜಿ.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸೇರಿದಂತೆ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಧಿಡೀರ್ ಭೇಟಿ
ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ( ಎಂ.ಎಸ್.ಪಿ.ಸಿ ) ಧಿಡೀರ್ ಭೇಟಿ ನೀಡಿ, ಪುಷ್ಟಿ ಇನ್ನಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿ, ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ವಿತರಿಸಲಾಗುವ ಆಹಾರ ಸಾಮಗ್ರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂದರ್ಭದಲ್ಲಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.