ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 75,938 ಮೊಬೈಲ್ ಫೋನ್ ಖರೀದಿಗೆ ಒಪ್ಪಿಗೆ ನೀಡಿದೆ.
ಹೌದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಪೂರೈಸಲು ₹ 89.61 ಕೋಟಿ ವೆಚ್ಚದಲ್ಲಿ ಒಟ್ಟು 75,938 ಮೊಬೈಲ್ ಫೋನ್ಗಳ ಖರೀದಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ತಲಾ ₹11,800 ಮೌಲ್ಯದ ಮೊಬೈಲ್ ಅನ್ನು ಟೆಂಡರ್ ಮೂಲಕ ಖರೀದಿಸಲಾಗುತ್ತದೆ. ಪೋಷಣ್ ಅಭಿಯಾನದಡಿ ಮಾಹಿತಿ ಸಂಗ್ರಹ, ದಾಖಲೀಕರಣ ಮತ್ತು ಸಂವಹನಕ್ಕೆ ಇದು ನೆರವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.