ಬೆಂಗಳೂರು : ಅನ್ನಭಾಗ್ಯ’ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅಕ್ಕಿ ಖರೀದಿ ಕೊನೆ ಹಂತದ ಮಾತುಕತೆಯಲ್ಲಿದೆ. ಶೀಘ್ರದಲ್ಲೇ ಫೈನಲ್ ಆಗಲಿದೆ. ಅಕ್ಟೋಬರ್ ತಿಂಗಳಿಂದಲೇ 10 ಕೆಜಿ ಅಕ್ಕಿ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಇದುವರೆಗೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು, ಮುಂದಿನ ಅಕ್ಟೋಬರ್ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಜೊತೆ ಹೆಚ್ಚುವರಿ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ನೀಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. 5 ಕೆಜಿ ಅಕ್ಕಿ ಬದಲು ಹಣ ಹಾಕುವ ವ್ಯವಸ್ಥೆಗೆ ಬ್ರೇಕ್ ಹಾಕಿ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಿಸಲಿದೆ.
ರಾಜ್ಯದಲ್ಲಿ ಬರ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಕೃಷಿ ಚಟುವಟಿಕೆಗಳಿಗೆ ನೀರಾಗಲಿದೆ ಎಂದು ಸಚಿವರು ಹೇಳಿದರು.