ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು ಎಂದರು. ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಆ.25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ, ಕಾರಣಏನೆಂಬುದನ್ನು ಸದ್ಯದಲ್ಲೇ ಹೇಳುತ್ತೇನೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಸದ್ಯ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, http://ahara.kar.nic.in ವೆಬ್ ಸೈಟ್ ಓಪನ್ ಆದ ಬಳಿಕ ಹಲವಡೆ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ತಾಂತ್ರಿಕ ಕಾರಣದಿಂದ ಸರ್ವರ್ ಡೌನ್ ಆಗಿದ್ದು, ಪಡಿತರ ಚೀಟಿದಾರರಿಗೆ ಭಾರೀ ಸಮಸ್ಯೆಯಾಗಿದೆ.