ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಇಲಾಖೆ ತಿಳಿಸಿದೆ.