ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ನೀಡಬೇಕಾಗಿದ್ದ ಆಗಸ್ಟ್ ತಿಂಗಳ ಹಣವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಖಾತೆಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿದೆ.
ಆಗಸ್ಟ್ ತಿಂಗಳ ನೇರ ನಗದು ವರ್ಗಾವಣೆ ಆಗಸ್ಟ್ 10ರಿಂದ ಆರಂಭವಾಗಬೇಕಿತ್ತು. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ಇದೀಗ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳ ಫಲಾನುಭವಿಗಳಿಗೆ 5ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ನೀಡಬೇಕಾಗಿದ್ದ ಹಣ ಸಂದಾಯವಾಗಿದೆ.
ಮುಂದಿನ ಒಂದು ವಾರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ನಗದು ಜಮಾ ಆಗಲಿದೆ ಆಹಾರ ಇಲಾಖೆ ತಿಳಿಸಿದೆ.