ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಟೋಬರ್ 1 ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪೀಡಿತ ತಾಲುಕುಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಮುಂದಿನ ತಿಂಗಳು ತಲಾ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಹೊಂದಿಸುವುದು ಕಷ್ಟವಾದ ಕಾರಣ 5 ಕೆ.ಜಿ. ಅಕ್ಕಿ ವಿತರಿಸಿ ಉಳಿದ 5 ಕೆಜಿಗೆ ಹಣ ನೀಡಲಾಗುತ್ತಿತ್ತು. ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಇನ್ಮುಂದೆ ಹಣದ ಬದಲಿಗೆ ಅಕ್ಕಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಅಕ್ಟೋಬರ್ 1 ರಿಂದ ಮೊದಲಿಗೆ ಬರ ಪೀಡಿತ ತಾಲುಕುಗಳ ಪಡಿತರ ಚೀಟಿ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 10 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.