
ಚಿತ್ರದುರ್ಗ : 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಸ್ವ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೆರಿದಂತೆ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಗಾಮ ಪಂಚಾಯತ್‍ಗೆ ಒಟ್ಟು 2 ಹೊಲಿಗೆ ಯಂತ್ರಗಳನ್ನು ಹಾಗೂ ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಸರಬರಾಜು ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‍ಗೆ ಒಟ್ಟು 1 ಬಡಗಿ ವೃತ್ತಿಯ ಸುಧಾರಿತ ಉಪಕರಣಗಳನ್ನು ಉಚಿತವಾಗಿ ವಿತರಿಸಲು ಗ್ರಾಮಾಂತರ ಕೈಗಾರಿಕೆ ವಿಭಾಗದ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 3 ರಿಂದ ನವೆಂಬರ್ 15 ರವರೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಫಲಾನುಭವಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತ್‍ಗಳ ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‍ಗಳನ್ನು ಸಂಪರ್ಕಿಸಬಹುದು ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.