ಬೆಂಗಳೂರು : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಗಳು ವಿವರ:
ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಫೂರ್ತಿ ಯೋಜನೆ, ಚರ್ಮಶಿಲ್ಪಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಡಾ.ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆಗಳಿದ್ದು, ಅರ್ಹ ಚರ್ಮ ಕುಶಲಕರ್ಮಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ: 9880486220 ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ: 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.