alex Certify GOOD NEWS : ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್ಸೈಟ್kacdc.karnataka.gov.in ಮೂಲಕ ಸೆ.18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು : ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ನಂಬರ್ನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು : ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ.50,000/-ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80 ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇದ್ದು, ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು : ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನ ವನ್ನು ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು : ಈ ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 50 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿಯ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು : ಈ ಯೋಜನೆಯಲ್ಲಿ ಸಿ.ಇ.ಟಿ/ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷದಿಂದ 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಯನ್ನು ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳ ಮಾರ್ಗಸೂಚಿ, ಆನ್ಲೈನ್ ಅರ್ಜಿ, ಜಿಲ್ಲಾ ಕಚೇರಿಗಳ ವಿಳಾಸ, ಸರ್ಕಾರಿ ಆದೇಶಗಳು ಹಾಗೂ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಕೆಳಕಂಡ ಕ್ಯುಆರ್ ಕೋಡ್ನ್ನು ಗೂಗಲ್ನಲ್ಲಿ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ : 9448451111, 08182-229634 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...