![](https://kannadadunia.com/wp-content/uploads/2023/12/krishna-bairegowda-1.jpg)
ಬೆಂಗಳೂರು : ಆರ್ಯ ವೈಶ್ಯ ನಿಗಮದ ವತಿಯಿಂದ ಹೊಸ ಉದ್ಯಮಿಗಳಿಗಾಗಿ ಒಂದು ಲಕ್ಷ ರೂ.ವರೆಗೆ ವಾರ್ಷಿಕ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯೆ ಪೂರ್ಣಗೊಳಿಸಿ ಮಾತನಾಡಿದ ಅವರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ಇಂದು ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೂ ತಲಾ 1 ಲಕ್ಷ ರೂ. ಎಂಬಂತೆ 5 ಕೋಟಿ ರೂ. ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಅಕೌಂಟ್ ಗೆ ಹಣ ಕಳುಹಿಸಲಾಗಿದೆ. ಸಮಾಜದ ಎಲ್ಲಾ ಹೊಸ ಉದ್ಯಮಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಾನು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ತಲಾ ೨೦ ಸಾವಿರ ರೂ. ಸಹಾಯಧನ ಹಾಗೂ ೮೦ ಸಾವಿರ ರೂ. ಸಾಲ ಬಿಡುಗಡೆ ಮಾಡಲಾಗುತ್ತದೆ. ಶೇ. ೪ ರಷ್ಟು ಬಡ್ಡಿ ದರದಲ್ಲಿ ಮರುಪಾವತಿಯನ್ನು ಆಯಪ್ ಮೂಲಕ ಮರುಪಾವತಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.