ಬೆಂಗಳೂರು : ರಾಜ್ಯ ಸರ್ಕಾರದಿಂದ ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಆಹಾರ ವಾಹಿನಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಆರ್ಯ ವೈಶ್ಯ ಸಮಾಜದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇದೀಗ ಬ್ಯಾಂಕ್ ಗಳ ಸಹಯೋಗದೊಂದಿಗೆ ಆಹಾರ ವಾಹಿನಿ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯ ಅಗತ್ಯವಿರುವವರು ಕೂಡಲೇ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಬೇಕಾಗಿ ವಿನಂತಿ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ದಾಖಲೆಗಳು
ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್, ಎರಡು ಫೋಟೋ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತಹ ಮೊಬೈಲ್ ನಂಬರ್.
ಎಲ್ಲಿ ಅರ್ಜಿ ಸಲ್ಲಿಸೋದು..?
ಹತ್ತಿರದಲ್ಲಿರುವ ಗ್ರಾಮವನ್, ಕರ್ನಾಟಕವನ್ ಈ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.