![](https://kannadadunia.com/wp-content/uploads/2024/02/WhatsApp-Image-2024-02-13-at-7.29.58-PM.jpeg)
ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರ ಗೌರವಧನವನ್ನು 5 ಸಾವಿರದಿಂದ 7 ಸಾವಿರ ರೂ.ವರೆಗೆ ಹೆಚ್ಚಳ ಮಾಡಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಆಶಾ ಕಾರ್ಯಕರ್ತರಿಗೆ ಮಾಸಿಕವಾಗಿ ನೀಡುವ 5 ಸಾವಿರ ರೂ. ಜೊತೆಗೆ 2 ಸಾವಿರ ಸೇರಿಸಿ ಒಟ್ಟು 7 ಸಾವಿರ ನೀಡಲಾಗುವುದು. ಆರೋಗ್ಯ ಸೇವೆ ಚಟುವಟಿಕೆಗಳನ್ನ ಪರಗಣಿಸಿ ಪ್ರೋತ್ಸಾಹಧನವನ್ನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.