ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿದ ಸಚಿವರು.ಆಶಾ ಕಾರ್ಯಕರ್ತೆಯರಿಗೆ ವಿವಿಧ ಚಟುವಟಿಕೆ ಆಡಿ ಸ್ಮಾರ್ಟ್ ಫೋನ್ ಹಾಗೂ ರೀಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.
ಈಗಿರುವ ನಿಯಮಾವಳಿ ಪ್ರಕಾರ ಆಶಾ ಕಾರ್ಯಕರ್ತರ ಸೇವೆಯನ್ನು ಕಾಯಂ ಮಾಡಲು ಬರುವುದಿಲ್ಲ. ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪೂರ್ಣವಧಿ ಅಥವಾ ಅರೆಕಾಲಿಕ ನೌಕರರಲ್ಲ. ಆದರೆ ಅವರಿಗೆ ಕಾರ್ಯನಿರ್ವಹಣೆ ಆಧಾರದ ಮೇಲೆ ಗೌರವಧನ ಹಾಗೂ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.