alex Certify ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ,ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ , ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ) , ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಳಿಗೆ ಸಾಲ ಸೌಲಭ್ಯ ಒದಗಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧೂ ಪೋರ್ಟಲ್http://sevasindhu.karnataka.gov.in ಮುಖಾಂತರ ಗ್ರಾಮ ಒನ್,ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಆಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ , ನಂ123/1037 ,1ನೇ ಮಹಡಿ ,20ನೇ ಮುಖ್ಯ ರಸ್ತೆ ,5ನೇ ಬ್ಲಾಕ್ ,ವೆಸ್ಟ್ ಆಫ್ ಕಾರ್ಡ್ ರಸ್ತೆ , ರಾಜಜಿನಗರ ಬೆಂಗಳೂರು. ದೂರವಾಣಿ ಸಂಖ್ಯೆ 080-23156006 ಅಥವಾ ಹೆಚ್ಚಿನ ವಿವರಗಳಿಗೆ www.dbcdc.karnataka.gov.in ಮೂಲಕ ಪಡೆಯಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ , ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...