ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ.

ಸಚಿವ ಕೃಷ್ಣ ಬೈರೇಗೌಡ ಅವರು, ಜಿಲ್ಲಾಧಿಕಾರಿಗಳ ಜೊತೆಗೆ  ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ “ಬಗರ್ ಹುಕುಂ ಆ್ಯಪ್‌” ಅನ್ನು ಬಿಡುಗಡೆಮಾಡಲಾಯಿತು. ರೈತರಿಗೆ ಶೀಘ್ರ ಪರಿಹಾರ, ಕಂದಾಯ ಗ್ರಾಮ ಘೋಷಣೆ ಹಾಗೂ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಆಯಪ್‌ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್‌ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ-ಸಮ್ಮತವಾಗಲಿದೆ ಎಂದರು.

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಸಾಗುವಳಿ ಚೀಟಿ ನೀಡಲ್ಲ. ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇವಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read